ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪೋಸ್ಟ್ ಮಾಡಲಾಗಿದೆ.
ಉತ್ತರ ಪ್ರದೇಶದ ಝಾನ್ಸಿಯ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಇದನ್ನು ಹೃದಯ ವಿದ್ರಾವಕ ಘಟನೆ ಎಂದು ಕರೆದರು ಮತ್ತು ಘಟನೆಯಲ್ಲಿ ಸಾವನ್ನಪ್ಪಿದ ಹತ್ತು ಮಕ್ಕಳ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಉತ್ತರ ಪ್ರದೇಶ ಸರ್ಕಾರದ ಮೇಲ್ವಿಚಾರಣೆಯಲ್ಲಿ ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಿ ಭರವಸೆ ನೀಡಿದರು.