ಹೊಸದಿಗಂತ ಡಿಜಿಟಲ್ ಡೆಸ್ಕ್:
ಝಾನ್ಸಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಕ್ಕಳ ವಾರ್ಡ್‌ನಲ್ಲಿ 10 ನವಜಾತ ಶಿಶುಗಳು ಸಾವನ್ನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರದ ಮೇಲ್ವಿಚಾರಣೆಯಲ್ಲಿರುವ ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣೆಗಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು.
ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿಯಲ್ಲಿ ಕನಿಷ್ಠ 10 ನವಜಾತ ಶಿಶುಗಳು ಸಾವನ್ನಪ್ಪಿವೆ.