ಶಾಸಕ ಸ್ಥಾನದಿಂದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅನರ್ಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ತಮ್ಮ ಶಾಸಕ ಸ್ಥಾನದಿಂದ ಅನರ್ಹರಾಗಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ನೀಡಿದ ವರದಿ ಪ್ರಕಾರ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್, ಸಿಎಂ ಹೇಮಂತ್ ಸೊರೆನ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿದೆ. ಇದರಿಂದ ಸೊರೆನ್ ತಮ್ಮ ವಿಧಸಭಾ ಸ್ಥಾನದಿಂದ ಅನರ್ಹರಾಗಿದ್ದಾರೆ. ಹೀಗಾಗಿ ಸಂವಿಧಾನದ 10ನೇ ಶೆಡ್ಯೂಲ್ ಪ್ರಕಾರ ಹೇಮಂತ್ ಸೊರೆನ್ ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಮತ್ತೆ ಚುನಾವಣೆಯಲ್ಲಿ ಗೆದ್ದು ಬರುವವರೆಗೂ ಸೊರೆನ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗಿದೆ.

ಮುಂದಿನ 6 ತಿಂಗಳಲ್ಲಿ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ನಡೆಸಲಿದೆ. ಈ ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ಸೊರೆನ್ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ಸಾಧ್ಯವಿದೆ. ಇದೀಗ ಶಾಸಕ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ಹಂಗಾಮಿ ಮುಖ್ಯಮಂತ್ರಿ ನೇಮಕಕ್ಕೆ ಜಾರ್ಖಂಡ್‌ನಲ್ಲಿ ತಯಾರಿ ನಡೆದಿದೆ.

81 ಸದಸ್ಯ ಬಲದ ಜಾರ್ಖಂಡ್‌ ವಿಧಾನಸಭೆಯಲ್ಲಿ ಜೆಎಂಎಂ 30, ಕಾಂಗ್ರೆಸ್‌ 18, ಬಿಜೆಪಿ 26, ಉಳಿದವರು 7 ಸ್ಥಾನ ಹೊಂದಿದ್ದಾರೆ.

ಅನರ್ಹರಾಗಲು ಕಾರಣವೇನು?
ತಮ್ಮ ಮಾಲೀಕತ್ವದ ಕಂಪನಿಗೆ ಗಣಿ ಲೈಸೆನ್ಸ್‌ ನವೀಕರಿಸಿಕೊಟ್ಟಪ್ರಕರಣ ಸಂಬಂಧ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರನ್ನು ರಾಜ್ಯಪಾಲರು ಅನರ್ಹಗೊಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!