Monday, September 26, 2022

Latest Posts

ವಿಶ್ವಾಸಮತ ಗೆದ್ದ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಕ್ರಮ ಗಣಿಗಾರಿಕೆ ಗುತ್ತಿಗೆ ವಿವಾದದ ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಇಂದು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವಾಸ ಮತಯಾಚಿಸಿ ಗೆಲುವು ಸಾಧಿಸಿದ್ದಾರೆ.
ಸೊರೆನ್ ಪರವಾಗಿ 48 ಶಾಸಕರು ಮತ ಚಲಾವಣೆ ಮಾಡಿದ್ದಾರೆ.
ಪ್ರತಿಪಕ್ಷದಿಂದ ಶಾಸಕರ ಕುದುರೆ ವ್ಯಾಪಾರ ಭೀತಿಯಿಂದ ಛತ್ತೀಸ್‌ಗಢದ ರಾಯಪುರದ ರೆಸಾರ್ಟ್‌ಗೆ ಸ್ಥಳಾಂತರಗೊಂಡಿದ್ದ ಜಾರ್ಖಂಡ್​ನ ಆಡಳಿತಾರೂಢ ಸಮ್ಮಿಶ್ರ ಸರ್ಕಾರದ ಶಾಸಕರು ವಿಶೇಷ ವಿಮಾನದ ಮೂಲಕ ನಿನ್ನೆ ರಾಜಧಾನಿ ರಾಂಚಿಗೆ ಮರಳಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಹೇಮಂತ್​ ಸೊರೆನ್ ತಮ್ಮ ಸರ್ಕಾರದ ಅಸ್ಥಿತ್ವವನ್ನು ಖಾತ್ರಿಪಡಿಸಲು ಸೋಮವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತ ಯಾಚಿಸುವುದಾಗಿ ತಿಳಿಸಿದ್ದರು.
ಹೇಮಂತ್ ಸೊರೆನ್​ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಸಾಧ್ಯತೆಯ ಕಾರಣ ಸುಮಾರು 30 ಶಾಸಕರು ಮತ್ತು ಯುಪಿಎ ಸರ್ಕಾರದ ಸಚಿವರು ವಿಶ್ವಾಸಮತಕ್ಕೆ ಹಾಜರಾಗಿದ್ದರು.
81 ಸದಸ್ಯರಿರುವ ವಿಧಾನಸಭೆಯಲ್ಲಿ ಆಡಳಿತಾರೂಢ ಸಮ್ಮಿಶ್ರ ಸರ್ಕಾರ 49 ಶಾಸಕರನ್ನು ಹೊಂದಿದ್ದು, ಅತಿ ದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ 18 ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಒಬ್ಬರನ್ನು ಹೊಂದಿದೆ. ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ 26 ಶಾಸಕರನ್ನು ಹೊಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!