SHOCKING | ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಗುರುವಾರ ಬೆಳಗ್ಗೆ( ಏ.6 ರಂದು) ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾ. 14 ರಿಂದ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.

ಕೋವಿಡ್‌ ಕಾರಣದಿಂದಾಗಿ 2020ರ ನವೆಂಬರ್‌ನಲ್ಲಿ ಜಗರ್ನಾಥ್‌ ಅವರಿಗೆ ಶ್ವಾಸಕೋಶದ ಕಸಿ ಮಾಡಲಾಗಿತ್ತು. ನಂತರ ಕಾಣಿಸಿಕೊಂಡ ಆರೋಗ್ಯದ ತೊಂದರೆಗಳಿಂದಾಗಿ ಅವರನ್ನು ಕಳೆದ ತಿಂಗಳು ಚೆನ್ನೈಗೆ ಏರ್‌ಲಿಫ್ಟ್‌ ಮಾಡಲಾಗಿತ್ತು.

ಮಹತೋ ಅವರು 2019ರಲ್ಲಿ ದುಮ್ರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಅವರು ಹಲವಾರು ಬಾರಿ ಜಾರ್ಖಂಡ್ ವಿಧಾನಸಭೆ ಸದಸ್ಯರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!