ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಪಿಐ(ಎಂ) ನಾಯಕ ಸುಭಾಷ್ ಮುಂಡಾ ಅವರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ.
ಸ್ಥಳೀಯ ಸಿಪಿಐ(ಎಂ) ನಾಯಕನನ್ನು ರಾಂಚಿಯ ದಲದಾಲಿ ಪ್ರದೇಶದಲ್ಲಿದ್ದ ಅವರ ಕಚೇರಿಯಲ್ಲಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಏಳು ಬಾರಿ ಗುಂಡುಗಳನ್ನು ಹಾರಿಸಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
ಘಟನೆ ನಡೆದ ಬಳಿಕ ಹತ್ಯೆ ಖಂಡಿಸಿ ಸ್ಥಳೀಯರಿಂದ ಮಧ್ಯರಾತ್ರಿಯವರೆಗೂ ಪ್ರತಿಭಟನೆ ನಡೆದಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.