ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತದ ಆಟಗಾರ್ತಿ ಜೂಲನ್ ಗೋಸ್ವಾಮಿ ಏಕದಿನ ಕ್ರಿಕೆಟ್ ನಲ್ಲಿ ಸರ್ವಶ್ರೇಷ್ಠ ದಾಖಲೆಯೊಂದನ್ನು ಬರೆದಿದ್ದಾರೆ.
ಇಂದು ನಡೆದ ಮಹಿಳಾ ವಿಶ್ವಕಪ್ ನ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೂಲನ್ ಟ್ಯಾಮಿ ಬ್ಯೂಮಾಂಟ್ ಅವರ ವಿಕೆಟ್ ಪಡೆದ ಜೂಲನ್ ಏಕದಿನ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಭಾಜನರಾದರು. ಜೂಲನ್ ಅವರ 199 ನೇ ಪಂದ್ಯದಲ್ಲಿ ಈ ಸಾಧನೆ ಮೂಡಿಬಂದಿರುವುದು ವಿಶೇಷ.
ಅವರ ನಂತರ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಕ್ಯಾಥರೀನ್ ಫಿಟ್ಜ್‌ಪ್ಯಾಟ್ರಿಕ್ ಹಾಗೂ ವೆಸ್ಟ್ ಇಂಡೀಸ್‌ನ ಅನಿಸಾ ಮೊಹಮ್ಮದ್ ತಲಾ 180 ವಿಕೆಟ್‌ಗಳನ್ನು ಗಳಿಸಿದ್ದಾರೆ. ಜೂಲನ್ ಅವರಿಗಿಂ 70 ವಿಕೆಟ್ ಮುಂದಿದ್ದಾರೆ. ಜೂಲನ್ ಗೋಸ್ವಾಮಿ ಮಹಿಳಾ ವಿಶ್ವಕಪ್‌ನಲ್ಲಿ ಸಹ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ. ಒಟ್ಟಾರೆ 41 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಆಸ್ಟ್ರೇಲಿಯಾದ ಲಿನ್ ಫುಲ್‌ಸ್ಟೋನ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ