ವಿಶ್ವಕಪ್: ಜೂಲನ್‌ ಗೋಸ್ವಾಮಿ ಮತ್ತೊಂದು ಮೈಲುಗಲ್ಲು; 200 ಪಂದ್ಯವಾಡಿದ ವಿಶ್ವದ ಎರಡನೇ ಆಟಗಾರ್ತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ತಂಡವು ಆಸ್ಟ್ರೇಲಿಯಾ ತಂಡದೊಂದಿಗೆ ಸೆಣಸುತ್ತಿದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ 277 ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ.
ಈ ನಡುವೆ ಈ ಪಂದ್ಯದಲ್ಲಿ ವೇಗದ ಬೌಲರ್‌ ಜೂಲನ್ ಗೋಸ್ವಾಮಿ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.
ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ ನಲ್ಲಿ 200 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಮಹಿಳಾ ಬೌಲರ್ ಹಾಗೂ ಇಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಳಿದ ವಿಶ್ವದ ಎರಡನೇ ಆಟಗಾರ್ತಿ ಎಂಬ ವಿಶೇಷ ಮೈಲುಗಲ್ಲು ತಲುಪಿದ್ದಾರೆ.
ಭಾರತ ತಂಡದ ನಾಯಕಿ ಮಿಥಾಲಿ ರಾಜ್ 229 ಪಂದ್ಯಗಳನ್ನಾಡಿ ಅಗ್ರಸ್ಥಾನದಲ್ಲಿದ್ದಾರೆ. ಜೂಲನ್‌ ಕೆಲದಿನಗಳ ಹಿಂದಷ್ಟೇ ಏಕದಿನದಲ್ಲಿ 250 ವಿಕೆಟ್‌ ಗಳಿಸಿದ ವಿಶ್ವದ ಮೊದ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!