ನಾನು ಮುಖ್ಯಮಂತ್ರಿ ರೇಸ್‌ನಲ್ಲಿ ಇಲ್ಲ-ಜಿಗ್ನೇಶ್‌ ಮೇವಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್‌ನ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ನಾನಿಲ್ಲ ಎಂದು ಗುಜರಾತ್‌ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಸ್ಪಷ್ಟಪಡಿಸಿದ್ದಾರೆ. ಗುಜರಾತ್‌ನಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದರ ಬಗ್ಗೆ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಕಟಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದರು. ಮೇವಾನಿ ಕಾಂಗ್ರೆಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರೂ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ಬದಲಿಗೆ ಆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ.

ಇನ್ನು ಕೆಲವೇ ತಿಂಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಗ್ನೇಶ್ ಮೇವಾನಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ರೀತಿ ಹೇಳಿದ್ದಾರೆ. ಜನರ ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ತಮ್ಮ ಪಕ್ಷದಿಂದ ಹೊರಹೊಮ್ಮಿದ ನಾಯಕನಿಗೆ ಆದ್ಯತೆ ನೀಡಬೇಕು. ಗುಜರಾತ್‌ನಲ್ಲಿ ಕಾಂಗ್ರೆಸ್ ಗೆದ್ದರೆ ಅಂತಹ ನಾಯಕನನ್ನೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದರು.

ಹಾರ್ದಿಕ್ ಪಟೇಲ್ ರಾಜೀನಾಮೆ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಲಿದೆ. ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಉತ್ತಮ ಅವಕಾಶವಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಆರ್ಥಿಕತೆಯು ಪ್ರಕ್ಷುಬ್ಧವಾಗಿದೆ, ಹಣದುಬ್ಬರ ಮತ್ತು ನಿರುದ್ಯೋಗದ ಸಂಖ್ಯೆ ಏರುತ್ತಿದೆ. ಕರೋನಾ ಅವಧಿಯಲ್ಲೂ ರಾಜ್ಯ ಸರ್ಕಾರ ಗುಜರಾತ್ ಜನರನ್ನು ಬೆಂಬಲಿಸಲಿಲ್ಲ ಎಂದು ಟೀಕೆ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!