Thursday, June 1, 2023

Latest Posts

ಬುರ್ಕಿನಾ ಫಾಸೊದಲ್ಲಿ ಜಿಹಾದಿಗಳ ದಾಳಿ: 44 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಉತ್ತರ ಬುರ್ಕಿನಾ ಫಾಸೊದಲ್ಲಿ ಇಸ್ಲಾಮಿಕ್ ಜಿಹಾದಿ ಉಗ್ರರು ನಡೆಸಿದ ದಾಳಿಯಲ್ಲಿ 44 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸರ್ಕಾರ ಹೇಳಿದೆ.

ಸೆನೊ ಪ್ರಾಂತ್ಯದ ಕೌರಕಾ ಮತ್ತು ತೊಂಡೊಬಿ ಗ್ರಾಮಗಳಲ್ಲಿ ಜಿಹಾದಿ ಉಗ್ರರು ದಾಳಿ ಮಾಡಿದ್ದಾರೆ ಎಂದು ಸಹೇಲ್ ಪ್ರದೇಶದ ಗವರ್ನರ್ ಲೆಫ್ಟಿನೆಂಟ್ ಕರ್ನಲ್, ರೊಡಾಲ್ಫ್ ಸೊರ್ಗೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಅಲ್‌-ಖೈದಾ ಮತ್ತು ಇಸ್ಲಾಮಿಕ್ ಸ್ಟೇಟ್ ಸಂಘಟನೆಗೆ ಸೇರಿದ ಜಿಹಾದಿ ಉಗ್ರರ ದಾಳಿಯಿಂದಾಗಿ ಕಳೆದ ಆರು ವರ್ಷಗಳಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದು, 20 ಲಕ್ಷಕ್ಕೂ ಹೆಚ್ಚು ಮಂದಿ ಸ್ಥಳಾಂತರಗೊಂಡಿದ್ದಾರೆ.

ಫೆಬ್ರುವರಿ ತಿಂಗಳಲ್ಲಿ ಇಸ್ಲಾಮಿಕ್ ಸ್ಟೇಟ್‌ನ ಉಗ್ರರು ನಡೆಸಿದ ದಾಳಿಯಲ್ಲಿ 70ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು.

ಕೆಲವು ವಾರಗಳ ಹಿಂದೆಯಷ್ಟೇ ನಡೆಸಿದ ಮತ್ತೊಂದು ದಾಳಿಯಲ್ಲಿ ಸೈನಿಕರು, ನಾಗರಿಕರು ಸೇರಿದಂತೆ 32 ಮಂದಿ ಸಾವಿಗೀಡಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!