ಮೂವರು ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆಗೆ ಶರಣಾದ ಯೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಜವಾನ ತನ್ನ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾನೂ ಗುಂಡುಹಾರಿಸಿಕೊಂಡು ಮೃತಪಟ್ಟ ಘಟನೆ ಜಮ್ಮು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಸೈನಿಕ ಶಿಬಿರವೊಂದರಲ್ಲಿ ನಡೆದಿದೆ.
ಜಿಲ್ಲೆಯ ದೇವಿಕಾ ಘಾಟ್ ಸಮುದಾಯ ಕೇಂದ್ರದಲ್ಲಿ ಶನಿವಾರ ಘಟನೆ ಸಂಭವಿಸಿದೆ. ಕಾನ್‌ಸ್ಟೆಬಲ್ ಭೂಪೇಂದ್ರ ಸಿಂಗ್ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಂಗ್ ತನ್ನ ಐಎನ್‌ಎಸ್‌ಎಎಸ್ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
ಯೋಧರು 8 ನೇ ಬೆಟಾಲಿಯನ್‌ಗೆ ಸೇರಿದವರಾಗಿದ್ದು, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಕರ್ತವ್ಯಗಳಿಗಾಗಿ ನಿಯೋಜಿಸಲಾದ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ನ 2ನೇ ಬೆಟಾಲಿಯನ್‌ನ ‘ಎಫ್’ ಕಂಪನಿಗೆ ಸೇರಿದವರಾಗಿದ್ದಾರೆ.
ಈ ಜವಾನರ ನಡುವೆ ಘಾಟನೆಗಿಂತ ಮೊದಲು ವಾಗ್ವಾದ ನಡೆದಿತ್ತು ಎಂದು ಪ್ರಾಥಮಿಕ ಮಾಹಿತಿಗಳಲ್ಲಿ ತಿಳಿದಬಂದಿದೆ. ಘಟನೆಗೆ ಕಾರಣವಾದ ನಿಖರವಾದ ಕಾರಣವನ್ನು ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!