spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಗಿಲಾನಿ ಮೊಮ್ಮಗನಿಗೆ ಸರ್ಕಾರಿ ಹುದ್ದೆಯಿಂದ ‘ಗೇಟ್ ಪಾಸ್’!

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಮತ್ತು ಹುರಿಯತ್ ಅಧ್ಯಕ್ಷ ಸೈಯದ್ ಅಲಿ ಗಿಲಾನಿ ನಿಧನರಾದ ಬಳಿಕ, ಈಗ ಮೊಮ್ಮಗ ಅನೀಸ್-ಉಲ್-ಇಸ್ಲಾಂ ರನ್ನು ಜಮ್ಮು ಕಾಶ್ಮೀರ ಸರ್ಕಾರ ತನ್ನ ಸರ್ಕಾರಿ ಸೇವೆಯಿಂದ ವಜಾಗೊಳಿಸಿದೆ.
ದೇಶ ವಿರೋಧಿ ಚಟುವಟಿಕೆ ಮತ್ತು ರಾಜ್ಯದ ಭದ್ರತೆಯ ಹಿತದೃಷ್ಟಿಯಿಂದ ಸುಮಾರು 30 ಸರ್ಕಾರಿ ಉದ್ಯೋಗಿಗಳನ್ನು ಜಮ್ಮು ಸರ್ಕಾರ ವಜಾ ಮಾಡುವ ಮೂಲಕ ಭಯೋತ್ಪಾದಕ ಸಂಬಂಧಿಕರ ವಿರುದ್ಧ ಜಮ್ಮು ಕಾಶ್ಮೀರ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ.
ಈ ಕ್ರಮ ತಕ್ಷಣವೇ ಜಾರಿಗೆ ಬರಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶಿಸಿದ್ದಾರೆ. ಅನೀಸ್, ಶೇರ್-ಇ-ಕಾಶ್ಮೀರ ಅಂತರಾಷ್ಟ್ರೀಯ ಕನ್ವೆನ್ಶನ್ ಸೆಂಟರ್ (SKICC) ನಲ್ಲಿ ಸಂಶೋಧನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು.
ಈ ಪ್ರಕರಣದ ಸತ್ಯಾಸತ್ಯತೆಗಳನ್ನು ಪರಿಗಣಿಸಿ, 311ನೇ ವಿಧಿಯ ಅಡಿಯಲ್ಲಿ ಅನೀಸ್ ರನ್ನು ತಮ್ಮ ಅಧಿಕಾರಿ ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss