ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ ಜೆಎಂಬಿ ಸಂಘಟನೆಯ ಶಂಕಿತ ಉಗ್ರರನನ್ನು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಜಮಾತ್-ಉಲ್-ಮುಜಾಹಿದೀನ್ ಬಂಧಿತ ಉಗ್ರ. ʼಎನ್ಐಎ ಸಿಬ್ಬಂದಿ ಜಿಲ್ಲೆಯ ಸುಭಾಷ್ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ, ಜಮಾತ್ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನ ಬಳಿ ಇದ್ದ ನಕಲಿ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಬಂಧಿತನ ವಿಚಾರಣೆ ನಡೆಯುತ್ತಿದ್ದು, ಉಗ್ರ ಸಂಘಟನೆಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.