COVID UPDATE | ಧಾರವಾಡಕ್ಕೂ ಕಾಲಿಟ್ಟ ಜೆಎನ್1

ಹೊಸದಿಗಂತ ವರದಿ ಧಾರವಾಡ:

ಜಿಲ್ಲೆಯಲ್ಲಿ ಕೋವಿಡ್-19 ಹೊಸ ರೂಪಾಂತರಿ ಜೆಎನ್.1 ಮೊದಲ‌ ಪ್ರಕರಣ ಪತ್ತೆ ಆಗಿದ್ದು, ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಹಾವೇರಿ ಜಿಲ್ಲೆಯ ವೃದ್ಧ ಹಾಗೂ ಧಾರವಾಡ ಎಸ್‌ಡಿಎಂ ಆಸ್ಪತ್ರೆಯಲ್ಲಿ ಯಾದಗಿರಿ ಮೂಲದ ವಿದ್ಯಾರ್ಥಿಗೆ ಸೋಂಕು ದೃಢಪಟ್ಟಿದ್ದು, ಇವರಿಗೆ ಚಿಕಿತ್ಸೆ ನಡೆಸಿದ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ‌ ಮಾಹಿತಿ ನೀಡಿದ್ದಾರೆ.

ಕೋವಿಡ್‌ನ ರೂಪಾಂತರಿ ಜೆಎನ್- 1 ಸೋಂಕು ವ್ಯಾಪಿಸುತ್ತಿರುವ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸೋಂಕಿನ ಬಗ್ಗೆ ಯಾರು ಭಯಪಡುವ ಅಗತ್ಯವಿಲ್ಲ. ಸೋಂಕಿತರಿಗೆ ಅಗತ್ಯ ಚಿಕತ್ಸೆ ನೀಡಲು ಜಿಲ್ಲಾಡಳಿತ ಸಜ್ಜುಗೊಂಡಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಖಾಸಗಿ ಹಾಗೂ ತಾಲೂಕು ಆಸ್ಪತ್ರೆಗಳಲ್ಲೂ ಚಿಕಿತ್ಸೆ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಸೋಂಕು ಪರೀಕ್ಷೆ ನಡೆಸುತ್ತಿರುವುದರಿಂದ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಭಯ ಪಡೆದೇ ಜಾಗೃತಿ ವಹಿಸುವಂತೆ ಸಲಹೆ ನೀಡಿದ್ದಾರೆ ಎಂದಿದ್ದಾರೆ.

ವೃದ್ಧರು, ಮಕ್ಕಳು ಕಡ್ಡಾಯವಾಗಿ ಮಾಸ್ಕ ಧರಿಸಿ ಮುಂಜಾಗೃತ ಕ್ರಮಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!