ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವನ್ನೇ ಬೆಚ್ಚಿಬೀಳಿಸಿರುವ ಕೋವಿಡ್ ರೂಪಾಂತರಿ ಜೆಎನ್.1 ಈಗ ಬೆಂಗಳೂರಿಗೂ ಆತಂಕ ಹೆಚ್ಚಿಸಿದೆ.
ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೋರ್ವರಲ್ಲಿ ಈ ಕೋವಿಡ್ ರೂಪಾಂತರಿ ವೈರಸ್ ಇರುವುದು ಖಚಿತವಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದ್ದು, ಗುರುವಾರ ಒಂದೇ ದಿನ 2492 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಸಧ್ಯ ಸೋಂಕಿತರ ಸಂಖ್ಯೆ 158ಕ್ಕೆ ಏರಿಕೆಯಾಗಿದೆ. ಈ ಪೈಕಿ ಬೆಂಗಲೂರು ನಗರವೊಂದರಲ್ಲೇ 414 ಸಕ್ರಿಯ ಪ್ರಕರಣಗಳಿವೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ