ಜ್ಞಾನವಾಪಿ: 11 ಮಂದಿಯಿಂದ ಸಮೀಕ್ಷೆಯ ವರದಿಗಾಗಿ ಅರ್ಜಿ ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ವರದಿಯನ್ನು ಕೇಳಿ ಒಟ್ಟು 11 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಹಿಂದು ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್, ಅರ್ಜಿಗಳ ಪರಿಶೀಲನೆಯ ನಂತರ ಅವರಿಗೆ ವರದಿಯ ಪ್ರತಿಯನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ವರದಿ ಕೋರಿದವರ ಪೈಕಿ ಹಿಂದು ಅರ್ಜಿದಾರರ ಪರ ವಕೀಲರು, ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿ, ಕಾಶಿ ವಿಶ್ವನಾಥ ಟ್ರಸ್ಟ್, ರಾಜ್ಯ ಸರ್ಕಾರ, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಕಾರ್ಯದರ್ಶಿ ಸೇರಿದಂತೆ 11 ಮಂದಿ ಇದ್ದಾರೆ.

ಇಲ್ಲಿ ಹಿಂದು ದೇವಸ್ಥಾನದ ಮೇಲೆ ಮಸೀದಿಯನ್ನು ನಿರ್ಮಿಸಲಾಯಿತೇ ಎಂಬ ಬಗ್ಗೆ ಪರಿಶೀಲನೆಗಾಗಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಎಎಸ್‌ಐ ವೈಜ್ಞಾನಿಕ ಸಮೀಕ್ಷೆ ಕೈಗೊಂಡಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!