Tuesday, February 27, 2024

ಜ್ಞಾನವಾಪಿ ಮಸೀದಿ ಕೇಸ್: ತೀರ್ಪ ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಯೋಗ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಪೂರ್ಣಗೊಳಿಸಿದ್ದು, ತೀರ್ಪ ಕಾಯ್ದಿರಿಸಿದೆ.

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್ ಅವರು ಕಕ್ಷಿದಾರರ ಪರ ವಕೀಲರ ವಾದ ಆಳಿಸಿ ನಂತರ ತೀರ್ಪನ್ನು ಕಾಯ್ದಿರಿಸಿದರು.

ವಾರಣಾಸಿಯ ಅಂಜುಮನ್ ಇಂತೇಝಾಮಿಯಾ ಮಸೀದಿ ಸಮಿತಿ ಹಾಗೂ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್, ವಾರಣಾಸಿಯ ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ದೇವಾಲಯ ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣಾಯೋಗ್ಯತೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿವೆ. ಪ್ರಸ್ತುತ ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ಪುರಾತನ ದೇವಾಲಯ ಮರುಸ್ಥಾಪಿಸುವಂತೆ ಕೋರಿ ದಾವೆ ಹೂಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!