ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲ್ಲ: ಹೈಕೋರ್ಟ್‌ ನಲ್ಲಿ ಮಸೀದಿ ಸಮಿತಿಗೆ ಹಿನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ್ಞಾನವಾಪಿ ಮಸೀದಿಯ (Gyanvapi mosque) ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಹಿಂದುಗಳಿಗೆ ಅವಕಾಶ ನೀಡಿರುವ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಅಲಹಾಬಾದ್‌ ಹೈಕೋರ್ಟ್‌ ನಿರಾಕರಿಸಿದೆ. ಇದರಿಂದ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ.

ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ಜ್ಞಾನವಾಪಿ ಮಸೀದಿ ಸಮಿತಿ ಅಲಹಾಬಾದ್‌ ಹೈಕೋರ್ಟ್‌ ಗೆ ಮನವಿ ಸಲ್ಲಿಸಿತ್ತು. ಜಿಲ್ಲಾ ಕೋರ್ಟ್‌ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಫೆ.6 ರೊಳಗೆ ತನ್ನ ಮನವಿಗೆ ತಿದ್ದುಪಡಿಗಳನ್ನು ಮಾಡಲು ಮಸೀದಿ ಸಮಿತಿಗೆ ಹೈಕೋರ್ಟ್‌ ಸೂಚನೆ ನೀಡಿದೆ.

ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ ಅಂಜುಮನ್ ಇಂತೆಝಾಮಿಯಾ ಮಸಾಜಿದ್ ಸಮಿತಿ (ಎಐಎಂಸಿ)ಗೆ ಅಲಹಾಬಾದ್ ಹೈಕೋರ್ಟ್ ಫೆಬ್ರುವರಿ 6 ರವರೆಗೆ ಕಾಲಾವಕಾಶ ನೀಡಿತು.

ಮಸೀದಿಯ ವ್ಯವಹಾರಗಳನ್ನು ನೋಡಿಕೊಳ್ಳುವ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್ ಈ ಆದೇಶವನ್ನು ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!