July 31, 2026
Friday, July 31, 2026
spot_img

ರಣರಂಗವಾದ ಜೆಎನ್‌ಯು ಕ್ಯಾಂಪಸ್‌: ಎಬಿವಿಪಿ–ಲೆಫ್ಟ್​ ವಿಂಗ್​ ಮಧ್ಯೆ ಘರ್ಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ರಾಜಕೀಯ ಮತ್ತೆ ತೀವ್ರಗೊಂಡಿದ್ದು, ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕೆಲಕಾಲ ಆತಂಕಕ್ಕೆ ಕಾರಣವಾಯಿತು. ಘಟನೆ ನಡೆದ ಬಳಿಕ ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿನಿಧಿಗಳು, ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆಗಳ ನಡುವೆ ತಮ್ಮ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ಸೇರಿಕೊಂಡು ಒಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಘಟನೆ ಪೂರ್ವಯೋಜಿತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ:

ಇದಕ್ಕೆ ಪ್ರತಿಯಾಗಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿ, ಗಲಾಟೆ ಆರಂಭಿಸಿದ್ದು ಎಬಿವಿಪಿಯೇ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಘಟನೆಯ ಬಳಿಕ ಪರಿಸ್ಥಿತಿ ಸಾಮಾನ್ಯಗೊಂಡಿದ್ದು, ವಿಶ್ವವಿದ್ಯಾಲಯ ಆಡಳಿತ ಸಂಪೂರ್ಣ ವರದಿ ಸಂಗ್ರಹಿಸುತ್ತಿದೆ. ದೆಹಲಿ ಪೊಲೀಸ್ ಪ್ರಕಾರ, ಇನ್ನೂ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ. ದೂರು ಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆಡಳಿತದ ಪೂರ್ವಾನುಮತಿ ಇಲ್ಲದೆ ಕ್ಯಾಂಪಸ್ ಪ್ರವೇಶ ಸಾಧ್ಯವಿಲ್ಲವೆಂದು ಕೂಡ ತಿಳಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !