ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿಯು ಪ್ರಿನ್ಸಿಪಾಲ್ ಸೈಂಟಿಸ್ಟ್ ಮತ್ತು ಸೀನಿಯರ್ ಸೈಂಟಿಸ್ಟ್ ಸೇರಿದಂತೆ ಒಟ್ಟು 368 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಾಕ್ಟರಲ್ ಪದವಿ ಜೊತೆಗೆ 10 ವರ್ಷಗಳ ಅನುಭವ ಅಥವಾ 8 ವರ್ಷ ವಿಜ್ಞಾನಿ / ಉಪನ್ಯಾಸಕ / ಎಕ್ಸ್ಟೆನ್ಷನ್ ಸ್ಪೆಷಲಿಸ್ಟ್ ಆಗಿ ಅನುಭವ ಹೊಂದಿರಬೇಕು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,31,400/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 8,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.