March 27, 2026
Friday, March 27, 2026
spot_img

ಸಾಲದ ನಡುವೆಯೂ ಉದ್ಯೋಗ ಪರ್ವ: 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಿಎಂ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿಗಳು ಮಂಡಿಸಿರುವ ಈ ಬಾರಿಯ ಬಜೆಟ್ ರಾಜ್ಯದ ಆರ್ಥಿಕ ಪರಿಸ್ಥಿತಿಯ ಏರಿಳಿತಗಳನ್ನು ಪ್ರತಿಬಿಂಬಿಸುತ್ತಿದೆ. ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಕಲ್ಯಾಣ ಯೋಜನೆಗಳ ಅನುಷ್ಠಾನಕ್ಕಾಗಿ ಸರ್ಕಾರವು ಬರೊಬ್ಬರಿ 1.26 ಲಕ್ಷ ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ. ರಾಜ್ಯದ ಆರ್ಥಿಕತೆಯಲ್ಲಿ 27,957 ಕೋಟಿ ರೂ. ರಾಜಸ್ವ ಕೊರತೆ ಕಾಣಿಸಿಕೊಂಡಿದ್ದು, ಇದು ಆರ್ಥಿಕ ಶಿಸ್ತಿನ ಮೇಲೆ ಸವಾಲೊಡ್ಡಿದೆ.

ಆದರೆ, ನಿರುದ್ಯೋಗಿಗಳಿಗೆ ಬಜೆಟ್‌ನಲ್ಲಿ ಸಿಹಿಸುದ್ದಿ ಸಿಕ್ಕಿದೆ. ದೀರ್ಘಕಾಲದಿಂದ ಕಾಯುತ್ತಿದ್ದ 56 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡುವ ಮೂಲಕ ಯುವಜನತೆಗೆ ಆಸರೆಯಾಗಲು ಸರ್ಕಾರ ಮುಂದಾಗಿದೆ.

ಇನ್ನು ಮೂಲಸೌಕರ್ಯ ವೃದ್ಧಿಗಾಗಿ 1,500 ಕೋಟಿ ರೂ. ಹಣವನ್ನು ಪ್ರತ್ಯೇಕವಾಗಿ ಮೀಸಲಿಡಲಾಗಿದ್ದು, ಅಭಿವೃದ್ಧಿಯ ವೇಗಕ್ಕೆ ಆದ್ಯತೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !