ಉದ್ಯೋಗಾಂಕ್ಷಿಗಳೇ ಗಮನಿಸಿ: ಜುಲೈ 14 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಬೆಳಗ್ಗೆ 10.30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here