ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜೂನ್ 16) ಅನುಮೋದನೆ ನೀಡಿದೆ.
ಉದ್ಯಮಿ ಮೋಹನ್ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ಈ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಪರ-ವಿರೋಧದ ಚರ್ಚೆ ಶುರುವಾಗಿದೆ. ವ್ಯಾಪಾರಸ್ಥರ ವಿರೋಧದಿಂದ ಮಸೂದೆ ಗೊಂದಲಕ್ಕೊಳಗಾಯಿತು.
ಈ ಹಿನ್ನೆಲೆಯಲ್ಲಿ ಇಂದು ವಿದಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು.