Monday, December 1, 2025

ಧಾರವಾಡದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಉದ್ಯೋಗಾಕಾಂಕ್ಷಿಗಳು: ಹಲವರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಧಾರವಾಡ ನಗರದ ಶ್ರೀನಗರ ಸರ್ಕಲ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಇಲಾಖೆಯಿಂದ ಪ್ರತಿಭಟನೆಗೆ ಅವಕಾಶ ನಿರಾಕರಣೆಯ ಮಧ್ಯೆಯೂ ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ರೂಪುರೇಷೆ ಸರಿಯಾಗಿ ತಿಳಿಸದೇ ಪ್ರತಿಭಟನೆ ಮಾಡದಂತೆ ಪೊಲೀಸ್ ಆಯುಕ್ತ ಎಚ್ಚರಿಕೆ ನೀಡಿದರೂ ಸಹ ಸಂಘಟನೆ ಪ್ರತಿಭಟನೆ ಮುಂದುವರಿಸಿದೆ. ನಗರದ ಶ್ರೀನಗರದಿಂದ ಪೊಲೀಸ್ ಅನುಮತಿ ಇಲ್ಲದೇ ಪ್ರತಿಭಟನೆ ಆರಂಭಗೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಹಿನ್ನೆಲೆ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

error: Content is protected !!