Wednesday, September 27, 2023

Latest Posts

ಜಿ20 ಶೃಂಗಸಭೆ ಮುನ್ನ ನಡೆಯಲಿದೆ ಜೋ ಬೈಡೆನ್, ಪ್ರಧಾನಿ ಮೋದಿ ಮಾತುಕತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಜಿ20 ಶೃಂಗಸಭೆ (G20 Summit) ನಡೆಯಲಿದ್ದು, ಈ ಹಿನ್ನೆಲೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden) ಸೆಪ್ಟೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತ ಭವನದ (White House) ಪ್ರಕಟಣೆ ತಿಳಿಸಿದೆ.

ಶೃಂಗಸಭೆಯ ಸಮಯದಲ್ಲಿ ಬೈಡೆನ್ ಜಿ20 ನಾಯಕತ್ವಕ್ಕಾಗಿ ಪ್ರಧಾನಿ ಮೋದಿಯನ್ನು ಶ್ಲಾಘಿಸುತ್ತಾರೆ. ಸೆಪ್ಟೆಂಬರ್ 9 ಮತ್ತು 10ರಂದು ಜಿ20 ಶೃಂಗಸಭೆ ನಡೆಸಲಿದ್ದು, ಅಮೆರಿಕದ ಅಧ್ಯಕ್ಷರು ಸೆ.7ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಸೆ.8ರಂದು ಅವರು ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಸುತ್ತಾರೆ ಎಂದು ಪ್ರಕಟಣೆಯಲ್ಲಿ ಶ್ವೇತ ಭವನ ಉಲ್ಲೇಖಿಸಿದೆ.

ಎರಡು ರಾಷ್ಟ್ರಗಳು ರಷ್ಯಾ (Russia) ಮತ್ತು ಉಕ್ರೇನ್ (Ukrain) ನಡುವಿನ ಯುದ್ಧದ ಆರ್ಥಿಕ ಮತ್ತು ಸಾಮಾಜಿಕ ಪರಿಣಾಮಗಳ ಬಗ್ಗೆ ಬೇಸರ ವ್ಯಕ್ತಪಡಿಸಲಿದ್ದು, ಜಾಗತಿಕ ಸವಾಲುಗಳನ್ನು ಎದುರಿಸುವುದು, ಬಡತನದ ವಿರುದ್ಧ ಉತ್ತಮವಾಗಿ ಹೋರಾಡಲು ವಿಶ್ವ ಬ್ಯಾಂಕ್ ಸೇರಿದಂತೆ ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಮಾತುಕತೆ ನಡೆಯಲಿದೆ ಎಂದು ಶ್ವೇತಭವನ ತಿಳಿಸಿದೆ.

ಜಿ20 ಪ್ರಪಂಚದ ಪ್ರಮುಖ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳ ಅಂತರ ಸರ್ಕಾರಿ ವೇದಿಕೆಯಾಗಿದೆ. ಭಾರತವು ಪ್ರಸ್ತುತ ಬಹುರಾಷ್ಟ್ರೀಯ ಗುಂಪಿನ ಅಧ್ಯಕ್ಷ ಸ್ಥಾನವನ್ನು ಹೊಂದಿದೆ. ಜಿ20ಯಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ ಮತ್ತು ಯುಎಸ್, ಯುರೋಪಿಯನ್ ಯೂನಿಯನ್ ಅನ್ನು ಒಳಗೊಂಡಿದೆ.

ಈ ಬಾರಿ ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇ ಅತಿಥಿ ರಾಷ್ಟ್ರಗಳಾಗಿವೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!