ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರ ಪತ್ನಿ ಜಿಲ್‌ಗೆ ಕೊರೋನಾ ಸೋಂಕು ತಗುಲಿದ್ದು, ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ.
ಡೆಲವೇರ್‌ನ ರೆಹೋಬೋತ್ ಬೀಚ್‌ನಲ್ಲಿರುವ ಮನೆಯಲ್ಲಿ ಜಿಲ್ ಐಸೋಲೇಟ್ ಆಗಿದ್ದಾರೆ. ಸೌಮ್ಯ ಲಕ್ಷಣಗಳ ಕಾಣಿಸಿದೆ. ಜೋ ಬಿಡೆನ್ ಕೂಡ ಪರೀಕ್ಷೆ ತೆಗೆದುಕೊಂಡಿದ್ದಾರೆ.
ವೈದ್ಯರ ಸಲಹೆ ಮೇರೆಗೆ ಜೋ ಬಿಡೆನ್ ಜಿ20 ಶೃಂಗಸಭೆಯಲ್ಲಿ ಭಾಗಿಯಾಗುವುದು ಬೇಡವೋ ಎನ್ನುವ ಬಗ್ಗೆ ಚರ್ಚೆ ಮಾಡಲಿದ್ದಾರೆ. ವಿಶ್ವದ 43 ದೇಶಗಳ ಪ್ರತಿನಿಧಿಗಳು ಭಾರತದಲ್ಲಿ ಉಪಸ್ಥಿತರಿರಲಿದ್ದಾರೆ.