ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜೋಯಲ್ ಮೊಕಿರ್, ಫಿಲಿಪ್ ಅಘಿಯಾನ್ ಮತ್ತು ಪೀಟರ್ ಹೊವಿಟ್ ಘೋಷಿಸಲಾಗಿದೆ. ನಾವೀನ್ಯತೆ-ಚಾಲಿತ ಆರ್ಥಿಕ ಬೆಳವಣಿಗೆಯನ್ನು ವಿವರಿಸಿದ್ದಕ್ಕಾಗಿ ಈ ಮೂವರಿಗೆ ಪ್ರಸಸ್ತಿ ಘೋಷಿಸಲಾಗಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ತಿಳಿಸಿದೆ.
ಡಿಸೆಂಬರ್ 10ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರತಿಯೊಬ್ಬ ನೊಬೆಲ್ ಪ್ರಶಸ್ತಿ ವಿಜೇತರಿಗೆ 11 ಮಿಲಿಯನ್ ಸ್ವೀಡಿಷ್ ಕ್ರೋನರ್ (ಸುಮಾರು 1 ಮಿಲಿಯನ್) ನಗದು ಬಹುಮಾನ ನೀಡಲಾಗುತ್ತದೆ.
ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದ ಟ್ರಂಪ್
ಈ ಬಾರಿ ಶಾಂತಿ ನೊಬೆಲ್ ಪ್ರಶಸ್ತಿ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಣ್ಣಿಟ್ಟಿದ್ದರು. ಅಂತಿಮವಾಗಿ ಇದು ವೆನೆಜುವೆಲಾದ ರಾಜಕಾರಣಿ ಮತ್ತು ಕೈಗಾರಿಕಾ ಎಂಜಿನಿಯರ್ ಮಾರಿಯಾ ಕೊರಿನಾ ಮಚಾದೊ ಪಾಲಾಯಿತು.