ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೈಂಗಿಕ ದೌರ್ಜನ್ಯದ ಕೇಸ್ ನಲ್ಲಿ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ರನ್ನು ಹೈದ್ರಾಬಾದ್ ಪೊಲೀಸರು ಬಂಧನ ಮಾಡಿದ್ದಾರೆ.
ಈ ವಿಷ್ಯ ಗೊತ್ತಾಗುತ್ತಿದ್ದಂತೆಯೇ ಜಾನಿ ಮಾಸ್ಟರ್ ಪತ್ನಿ ಆಯೇಷಾ ಪೊಲೀಸ್ ಸ್ಟೇಶನ್ ಗೆ ಬಂದು ಗಂಡನ ಬಂಧನದ ಬಗ್ಗೆ ವಿಚಾರಿಸಿದ್ದಾರೆ. ನನ್ನ ಗಂಡನನ್ನು ನೋಡಬೇಕು ಅಂತ ಹೈಡ್ರಾಮಾ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯದ ಕೇಸ್ ನಲ್ಲಿ ಎಫ್ ಐ ಆರ್ ಆಗುತ್ತಿದ್ದಂತೆಯೇ ಜಾನಿ ಮಾಸ್ಟರ್ ತಲೆಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ತಂಡ ರಚನೆ ಮಾಡಲಾಗಿತ್ತು. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಜಾನಿಯನ್ನು ಹೈದ್ರಾಬಾದ್ ಪೊಲೀಸರು ಬಂಧನ ಮಾಡಿದ್ದಾರೆ..
ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್ ಅರೆಸ್ಟ್ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಜಾನಿ ಮಾಸ್ಟರ್ ಅನೇಕ ಸ್ಟಾರ್ ಹೀರೋ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಅನೇಕ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಧೀ, ಡ್ಯಾನ್ಸ್ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್ ಈಗ ಟಾಲಿವುಡ್‌ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದಾರೆ. ಟಾಲಿವುಡ್ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿಯ ಅನೇಕ ಸಿನಿಮಾಗಳಿಗೆ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಇದೀಗ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿವೆ.