ಚೀನಾ ಸೇರಿ 6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೋವಿಡ್​ ಹೊಸ ರೂಪಾಂತರಿ ಬಿಎಫ್​7 ವೈರಾಣು ತಡೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ, ಚೀನಾ ಸೇರಿದಂತೆ ಪ್ರಮುಖ ಆರು ರಾಷ್ಟ್ರಗಳಿಂದ ಭಾರತಕ್ಕೆ ಆಗಮಿಸುವ ಎಲ್ಲಾ ವಿಮಾನ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಿದೆ.

ಚೀನಾ ಮತ್ತು ಇತರ ರಾಷ್ಟ್ರಗಳಲ್ಲಿ ಬಿಎಫ್​7 ಹೊಸ ರೂಪಾಂತರಿ ವೇಗವಾಗಿ ಹರಡುತ್ತಿದ್ದು, ಈ ಸೋಂಕು ಭಾರತಕ್ಕೂ ಕಾಲಿಡುವ ಸಂಭವವಿದೆ. ಆದ್ದರಿಂದ ಈಗಾಗಲೇ ಕೇಂದ್ರ ಸರ್ಕಾರ ಮಾಸ್ಕ್​ ಧರಿಸುವುದೂ ಸೇರಿದಂತೆ ಕೆಲವು ನಿಯಮಗಳನ್ನು ಪಾಲಿಸಲು ಜನತೆಗೆ ಮನವಿ ಮಾಡಿದೆ. ಇದರ ನಡುವೆ ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಣ್ಣಿಡಲು ಆರೋಗ್ಯ ಸಚಿವಾಲಯ ಮುಂದಾಗಿದೆ.

2023ರ ಜನವರಿ 1ರಿಂದ ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥಾಯ್ಲೆಂಡ್‌ನಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ಹೊರಬರುವ ಮೊದಲು ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕು. ಇದರ ವರದಿಯನ್ನು ಏರ್​ ಸುವಿಧಾ ಪೋರ್ಟಲ್​​ ಅಪ್‌ಲೋಡ್​ ಮಾಡಬೇಕೆಂದು ಸೂಚಿಸಲಾಗಿದೆ.

ಭಾರತಕ್ಕೆ ಆಗಮಿಸುವ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ರ‍್ಯಾಂಡಮ್ ಪರೀಕ್ಷೆಯನ್ನು ಶೇ.2ರಷ್ಟು ಹೆಚ್ಚುವರಿಯಾಗಿ ನಡೆಸಬೇಕು. ಭಾರತಕ್ಕೆ ಪ್ರಯಾಣ ಬೆಳೆಸಿದ 72 ಗಂಟೆಗಳೊಳಗೆ ಈ ಪರೀಕ್ಷೆ ನಡೆಸಬೇಕೆಂದೂ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!