ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಂಗ್ಯೂ ಓಡಿಸೋಕೆ ಸರ್ಕಾರದ ಜತೆ ನೀವೂ ಕೈ ಜೋಡಿಸಿ ಎಂದು ಸಿಎಂ ಸಿದ್ದರಾಮಯ್ಯ ಜನರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ನಗರಪಾಲಿಕೆ, ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆಗಳ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ ಎಂದಿದ್ದಾರೆ.
ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರಿನಿಂದಾಗಿರುವ ಅನಾಹುತಗಳನ್ನು ನಾವು ನೋಡಿದ್ದೇವೆ. ಅನೇಕರು ಸಾವೀಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ.
ಶುದ್ಧ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದೆಂದು ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಶುದ್ಧ ಕುಡಿಯುವ ನೀರಿನ ಸರಬರಾಜಿನ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡಲಿದೆ. ಆದರೆ, ನಾಗರಿಕರು ಕೂಡ ಸಹಕರಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.