ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿ.ಪಿ ಯೋಗೇಶ್ವರ ಕಾಂಗ್ರೆಸ್ ಸೇರಿದ್ದು ನಮಗೇನೂ ಆಶ್ಚರ್ಯ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಇದರಲ್ಲಿ ಆಶ್ಚರ್ಯ ಪಡುವಂತದ್ದು ಏನೂ ಇಲ್ಲ,ಯಾವಾಗ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ರೋ ಆಗಲೇ ಇದರ ನಿರೀಕ್ಷೆ ಇತ್ತು ಅದೇ ರೀತಿಯಾಗಿದೆ.
ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ, ಜೆಡಿಎಸ್ ಕಾರ್ಯಕರ್ತರು ನಿಖಿಲ್ ಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡ್ತೀವಿ ಎಂದು ಹೇಳಿದ್ದರು. ಈಗ ಎಲ್ಲವೂ ಬದಲಾಗಿದೆ, ನಮಗ್ಯಾವ ಆಶ್ವರ್ಯ ಇಲ್ಲ ಬಿಡಿ ಎಂದಿದ್ದಾರೆ.