ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ಬಿಡ್ತಾರೆ ಎಂದು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ.
ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್ ಶಾಸಕ ರಮೇಶ್ ಬಂಡೀಸಿದ್ದೇಗೌಡ ಅನುಮಾನ ವ್ಯಕ್ತಪಡಿಸಿದ್ದಾರೆ.
ಮಳವಳ್ಳಿಯ ಕಾಂಗ್ರೆಸ್ ಸಭೆಯಲ್ಲಿ ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿ, ಚುನಾವಣೆ ಬಂತು ಎಂದರೇ ಸಾಕು ಆಸ್ಪತ್ರೆ ಸೇರ್ತಾರೆ. ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ ಆಗುತ್ತೆ. ನಾಲ್ಕನೇ ದಿನಕ್ಕೆ ಇಡೀ ರಾಜ್ಯ ಸುತ್ತುತ್ತಾರೆ. ಅದು ಹೇಗೆ ಸಾಧ್ಯ ಅನ್ನೋದು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.