ರಾಜಸ್ಥಾನದಲ್ಲಿ ಭಾರತ-ಅಮೆರಿಕ ಸೇನೆಯ ಜಂಟಿ ಮಿಲಿಟರಿ ಸಮರಾಭ್ಯಾಸ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಬಿಕಾನೇರ್‌ನ ಮಹಾಜನ್ ಫೀಲ್ಡ್‌ನಲ್ಲಿ ಭಾರತ ಮತ್ತು ಅಮೆರಿಕ ಸೇನೆಯ ಜಂಟಿ ಮಿಲಿಟರಿ ಸಮರಾಭ್ಯಾಸ 2024 ರ 20ನೇ ಆವೃತ್ತಿ ಪ್ರಾರಂಭವಾಗಿದೆ. ಈ ಸಮರಾಭ್ಯಾಸ ಸೆಪ್ಟೆಂಬರ್ 22 ರವರೆಗೆ ಮುಂದುವರಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕದ ಒಟ್ಟು 1,200 ಸೈನಿಕರು ಈ ಅಭ್ಯಾಸದಲ್ಲಿ ಭಾಗವಹಿಸುತ್ತಿದ್ದಾರೆ. ಸೋಮವಾರ ಬೆಳಗ್ಗೆ 10:30ರ ಸುಮಾರಿಗೆ ಪಥಸಂಚಲನದೊಂದಿಗೆ ಸೇನಾ ಸಮರಾಭ್ಯಾಸ ಆರಂಭಗೊಂಡಿತು.

https://x.com/adgpi/status/1833098888418357588?ref_src=twsrc%5Etfw%7Ctwcamp%5Etweetembed%7Ctwterm%5E1833098888418357588%7Ctwgr%5Efaf16b5291572a5d0a5f59ddc29453d845983a5a%7Ctwcon%5Es1_&ref_url=https%3A%2F%2Fpublictv.in%2Fbiggest-joint-military-exercise-between-india-us-begins-in-rajasthan%2F

600 ಸಿಬ್ಬಂದಿಯನ್ನು ಒಳಗೊಂಡಿರುವ ಭಾರತೀಯ ಸೇನಾ ತುಕಡಿಯನ್ನು ರಜಪೂತ್ ರೆಜಿಮೆಂಟ್‍ನ ಬೆಟಾಲಿಯನ್ ಮತ್ತು ಇತರ ಶಸ್ತ್ರಾಸ್ತ್ರ ಪಡೆಗಳ ಸಿಬ್ಬಂದಿ ಭಾಗವಹಿಸಲಿದ್ದಾರೆ.

ವಿಶ್ವಸಂಸ್ಥೆಯ ಆದೇಶದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಎರಡೂ ಕಡೆಯ ಜಂಟಿ ಮಿಲಿಟರಿ ಸಾಮಥ್ರ್ಯವನ್ನು ಹೆಚ್ಚಿಸುವುದು ಈ ಅಭ್ಯಾಸದ ಗುರಿಯಾಗಿದೆ. ಎರಡೂ ಕಡೆಯವರು ಜಂಟಿ ಕಾರ್ಯಾಚರಣೆಗಳನ್ನು ನಡೆಸಲು ತಂತ್ರಗಳನ್ನು ಪರಸ್ಪರ ಹಂಚಿಕೊಳ್ಳಲಿದ್ದಾರೆ. ಇದರಿಂದಾಗಿ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ವೃದ್ಧಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!