Karnataka Lok Election LIVE: ಜೋಶಿ, ಕಾರಜೋಳ ಮುನ್ನಡೆ, ಬಳ್ಳಾರಿಯಲ್ಲಿ ‘ಕೈ’ ಮೇಲುಗೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಶುರುವಾಗಿದ್ದು, ಫಲಿತಾಂಶ ಹೊರಬೀಳಲಿದೆ, ಚಿತ್ರದುರ್ಗ, ಧಾರವಾಡ ಹಾಗೂ ಬಳ್ಳಾರಿ ಅಪ್‌ಡೇಟ್‌ ಇಲ್ಲಿದೆ..

ಆರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 1,72,077 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ 1,57,877 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 14200 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಧಾರವಾಡ: ರಾಜ್ಯದ ಗಮನ ಸೆಳೆದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಮುನ್ನಡೆ ಸಾಧಿಸಿ, ಗೆಲುವಿನತ್ತ ದಾಪುಗಾಲಿಡುತ್ತಿದ್ದಾರೆ. 1,09,772 ಮತ ಪಡೆದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಅವರಿಗಿಂತ 21,411 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 88,361 ಮತ ಪಡೆದ ಅಸೂಟಿ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ತುಸು ಬೇಸರ ಮೂಡಿಸದರೆ, ಬಿಜೆಪಿಗರಲ್ಲಿ ಹರ್ಷದ ಹೊನಲು ಹರಿಸಿದೆ.

ಬಳ್ಳಾರಿ: ಲೋಕಸಭೆ ಸಾರ್ವತ್ರಿಕ (ಎಸ್ಟಿ ಮೀಸಲು) ಬಳ್ಳಾರಿ ಕ್ಷೇತ್ರದ ಚುನಾವಣೆ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು, ಇಲ್ಲಿವರೆಗೆ, ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾo ಅವರು 1,74,870 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು 1,40,445 ಮತಗಳನ್ನು ಪಡೆದಿದ್ದಾರೆ.
ಕಾಂಗ್ರಸ್ ಅಭ್ಯರ್ಥಿ ಈ. ತುಕಾರಾಂ ಅವರು 34,425 ಮತಗಳ ಅಂತರಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!