ಜೋಶಿಮಠದಲ್ಲಿ ಬಿರುಕು: ಸಂತ್ರಸ್ತ ಕುಟುಂಬಗಳಿಗೆ 1.5 ಲಕ್ಷ ರೂ. ಪರಿಹಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಾಖಂಡದ ಜೋಶಿಮಠದಲ್ಲಿ ಭೂ ಕುಸಿತದಿಂದ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆಸರ್ಕಾರ ತಲಾ 1.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಜೋಶಿಮಠದ ಕೆಲವೆಡೆ ಬಿರುಕುಗಳು ಒಂದೊಂದಾಗಿಯೇ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ಕೆಲವು ದಿನಗಳಲ್ಲಿ ಇದರ ತೀವ್ರತೆ ಹೆಚ್ಚಾಗಿ, ದುರಂತವಾಗಿ ಮಾರ್ಪಟ್ಟಿತು. ನಗರ ಮುಳುಗಡೆಯಾಗುವ ಭೀತಿಯಲ್ಲಿ ನಿವಾಸಿಗಳಿದ್ದು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸರ್ಕಾರ ಮುಂದಾಗಿದೆ.
ಅಪಾಯಕಾರಿ ಎಂದು ಗುರುತಿಸಲಾಗಿರುವ 600ಕ್ಕೂ ಹೆಚ್ಚು ಕಟ್ಟಡಗಳನ್ನು ನೆಲಸಮಗೊಳಿಸಲು ಸರ್ಕಾರ ಮಂಗಳವಾರ ಮುಂದಾಗಿತ್ತು. ಆದರೆ ಸ್ಥಳಿಯರು ಈ ನಡೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ನೆಲಸಮ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
ಜೋಶಿಮಠ ಮುಳುಗಡೆಯ ಹಿನ್ನೆಲೆ ಅಲ್ಲಿ ಸಾವಿರಾರು ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗುತ್ತಿದೆ. ಉತ್ತರಾಖಂಡ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಕೆಡವಲಾಗುತ್ತಿರುವ ಹೋಟೆಲ್‌ಗಳ ಆಸ್ತಿಯ ಬಗ್ಗೆ ಸಮೀಕ್ಷೆ ನಡೆಸಿ ಪರಿಹಾರವನ್ನು ಘೋಷಿಸಲಾಗುವುದು ಎಂದು ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!