Saturday, February 4, 2023

Latest Posts

ಜೋಶಿಮಠದಲ್ಲಿ ಮುಂದುವರಿದ ಭೂಕುಸಿತ: ʻಸುರಕ್ಷಿತ ಪರಿಹಾರ ಶಿಬಿರʼ ಸ್ಥಾಪಿಸಿದ ಜಿಲ್ಲಾಡಳಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರಾಖಂಡದ ಜೋಶಿಮಠ ಪಟ್ಟಣದಲ್ಲಿ ಭೂ ಕುಸಿತ ಮುಂದುವರಿದಿದ್ದು, ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಮನೆಗಳು ಮತ್ತು ರಸ್ತೆಗಳಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡ ಬಳಿಕ ಒಟ್ಟು 66 ಕುಟುಂಬಗಳು ಜೋಶಿಮಠದಿಂದ ವಲಸೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಪ್ರಕೃತಿ ವಿಕೋಪದಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ‘ಸುರಕ್ಷಿತ ಪರಿಹಾರ ಶಿಬಿರ’ಗಳಲ್ಲಿ ಉಳಿಯಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ಅವರು ನಿನ್ನೆ ರಾತ್ರಿ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ಯಾವುದಾದರೂ ಅವಶ್ಯಕತೆ ಇದ್ದಲ್ಲಿ ತಕ್ಷಣ ಲಭ್ಯವಾಗುವಂತೆ ವ್ಯವಸ್ತೆ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಾರ, ಜೋಶಿಮಠದಲ್ಲಿ ನಿರಂತರ ಭೂಮಿ ಕುಸಿತದ ಪರಿಣಾಮವಾಗಿ 561 ಮನೆಗಳಲ್ಲಿ ಬಿರುಕುಗಳು ಉಂಟಾಗಿವೆ ಎಂದು ವರದಿಯಾಗಿದೆ. ಸಂತ್ರಸ್ತ ಜನರು, ಅವರ ಕುಟುಂಬಗಳು ಮತ್ತು ಮಕ್ಕಳು ಪ್ರಸ್ತುತ ರಾತ್ರಿ ಆಶ್ರಯದಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಸರ್ಕಾರದಿಂದ ಪ್ರೀ ಫ್ಯಾಬ್ರಿಕೇಟೆಡ್ ಮನೆಗಳನ್ನು ನೀಡುವುದಾಗಿ ಭರವಸೆ ನೀಡಲಾಗಿದೆ ಎಂದು ಸ್ಥಳೀಯರು ಹೇಳಿದರು. ಆದರೆ, ಮನೆಗಳು ಯಾವಾಗ ಹಂಚಿಕೆಯಾಗುತ್ತವೆ ಎಂಬ ಆತಂಕದಲ್ಲಿದ್ದಾರೆ.ಏತನ್ಮಧ್ಯೆ, ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯ ಸರ್ಕಾರವು ಪ್ರದೇಶಕ್ಕೆ ತಜ್ಞರ ತಂಡವನ್ನು ಕಳುಹಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಕೂಡ ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ಚಮೋಲಿ ಮುಖ್ಯ ಅಭಿವೃದ್ಧಿ ಅಧಿಕಾರಿ (ಸಿಡಿಒ) ಲಲಿತ್ ನಾರಾಯಣ ಮಿಶ್ರಾ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!