Thursday, November 20, 2025

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಮೇಲೆ ಭೀಕರ ಹಲ್ಲೆ, ಕೊಲೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕೊಲೆಯಾದ ಪಪ್ಪು ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮಾಜಿ ​​ಅಧ್ಯಕ್ಷ ಅಶೋಕ್ ಸಿಂಗ್ ಅವರ ಸೋದರಳಿಯ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಎಡಿಸಿಪಿ) ಪುಷ್ಕರ್ ವರ್ಮಾ ತಿಳಿಸಿದ್ದಾರೆ.

error: Content is protected !!