Friday, March 31, 2023

Latest Posts

ಉತ್ತರ ಕನ್ನಡದ ಪತ್ರಕರ್ತನ ಚಿಕಿತ್ಸೆಗೆ 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಹೊಸ ದಿಗಂತ ವರದಿ, ಬೆಂಗಳೂರು:

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲ್ಲೂಕಿನ ಹಿರಿಯ ಪತ್ರಕರ್ತ ದತ್ತಾತ್ರೇಯ ತಿಮ್ಮಣ್ಣ ಭಟ್ ಅವರ ಚಿಕಿತ್ಸೆಗಾಗಿ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮಾಡಿದ ಮನವಿ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಅವರು, ಧಾರವಾಡ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸುಮಾರು
3 ಲಕ್ಷ ರೂ ವೆಚ್ಚ ಮಾಡಿಕೊಂಡಿದ್ದರು. ಅವರು ಕಷ್ಟದಲ್ಲಿರುವ ಬಗ್ಗೆ ಉತ್ತರ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಗಮನಕ್ಕೆ ತಂದಿತ್ತು.

ಪತ್ರಕರ್ತನ ಕುಟುಂಬಕ್ಕೆ ಕೂಡಲೇ ಪರಿಹಾರ ಮಂಜೂರು ಮಾಡುವಂತೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿಗಳು ಪರಿಹಾರ ಮಂಜೂರು ಮಾಡಿದ್ದಾರೆ.

ಹಿರಿಯ ಪತ್ರಕರ್ತ ದತ್ತಾತ್ರೇಯ ತಿಪ್ಪಣ್ಣ ಭಟ್ ಅವರಿಗೆ ಪರಿಹಾರ ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆಯನ್ನು ಸಲ್ಲಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!