ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ರಕರ್ತರೊಬ್ಬರ ಮನೆಗೆ ನುಗ್ಗಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ರಾಣಿಗಂಜ್ ಬಜಾರ್ ಪ್ರದೇಶದಲ್ಲಿ ಇಂದು ಬೆಳಗ್ಗೆ ದುಷ್ಕರ್ಮಿಗಳ ಗುಂಪೊಂದು ಪತ್ರಕರ್ತರೊಬ್ಬರ ಮನೆಗೆ ನುಗ್ಗಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಮೃತರನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ.
ಇದೀಗ ಮೃತರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಕೊಲೆಯಾದ ಸ್ಥಳದಲ್ಲಿ ಪೊಲೀಸರ ತನಿಖೆ ನಡೆಯುತ್ತಿದೆ ಎಂದು ಅರಾರಿಯಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಹೇಳಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.