ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅದ್ರಂತೆ, ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್ ಮಲಿಕ್ ಮತ್ತು ಅಜಯ್ ಕುಮಾರ್ ಈ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದವರು.
ದೆಹಲಿಯ ಸಾಕೇತ್ ನ್ಯಾಯಾಲಯವು ಶುಕ್ರವಾರ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನ ಘೋಷಿಸಿದ್ದು, ದಂಡವನ್ನೂ ವಿಧಿಸಿದೆ. ಇನ್ನು ಎಲ್ಲಾ ಅಪರಾಧಿಗಳಿಗೆ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.
ದೆಹಲಿ ಮೂಲದ ಟಿವಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರನ್ನ ಸೆಪ್ಟೆಂಬರ್ 30, 2008 ರಂದು ದೆಹಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.