ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆಗೆ ಚುನಾವಣೆಗೂ ಮೊದಲೇ ಕೆಲ ನಾಯಕರು ಅವಿರೋಧವವಾಗಿ ಆಯ್ಕೆಯಾಗಿದ್ದಾರೆ.
ಗುಜರಾತ್‌ನಿಂದ ಜೆಪಿ ನಡ್ಡಾ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇತ್ತ ರಾಜಸ್ಥಾನದಿಂದ ಸ್ಪರ್ಧಿಸಿದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜೆಪಿ ನಡ್ಡಾ ಹಾಲಿ ಹಾಗೂ ತಮ್ಮದೇ ತವರು ರಾಜ್ಯವಾದ ಹಿಮಾಚಲಪ್ರದೇಶದ ರಾಜ್ಯಸಭೆ ಸದಸ್ಯರಾಗಿದ್ದಾರೆ. ಆದರೆ ಈ ಬಾರಿ ಅವರ ಮರು ಆಯ್ಕೆಗೆ ಅಗತ್ಯವಾದ ಪ್ರಮಾಣದ ಮತಗಳು ಹಿಮಾಚಲ ಪ್ರದೇಶದಲ್ಲಿ ಇಲ್ಲದ ಕಾರಣ ಅವರಿಗೆ ಗುಜರಾತ್‌ನ ಟಿಕೆಟ್ ನೀಡಲಾಗಿತ್ತು.
ಇನ್ನು ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿ ನಾಯಕರಾದ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಕೂಡ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಕಣದಲ್ಲಿ ಬೇರೆ ಯಾರೂ ಸ್ಪರ್ಧಿಗಳು ಇಲ್ಲದ ಕಾರಣ, ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.