ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಮುಗಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಂಗಳೂರಿನಲ್ಲಿ ‘ದಿ ಕೇರಳ ಸ್ಟೋರಿ’ ಸಿನೆಮಾ ವೀಕ್ಷಿಸಿದರು.
ಇದಕ್ಕೂ ಮುನ್ನ ಬೆಂಗಳೂರಿಗೆ ಅವರು ಆಗಮಿಸಿದ ಸಂದರ್ಭ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತ್ಮೀಯವಾಗಿ ಬರಮಾಡಿಕೊಂಡರು.
ಸಂಸದರಾದ ನಳಿನ್, ತೇಜಸ್ವಿ ಸೂರ್ಯ, ಚಿಕ್ಕಪೇಟೆ ಶಾಸಕರಾದ ಉದಯ್ ಗರುಡಾಚಾರ್ ಮತ್ತಿತರರ ಜತೆಗೂಡಿ ಅವರು “ದಿ ಕೇರಳ ಸ್ಟೋರಿ” ಚಲನಚಿತ್ರವನ್ನು ವೀಕ್ಷಿಸಿದರು.