ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೆ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹೊಸ ವರ್ಷದಂದೇ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಿದ್ದು, ಜನರು ಇಡೀ ರಾತ್ರಿ ಕತ್ತಲೆಯಲ್ಲಿ ಮುಳುಗಿದ್ದರು. ಇದೀಗ ಅಲ್ಲಿ ಜೀವನ ಅಲ್ಲೋಲ ಕಲ್ಲೋಲವಾಗಿದೆ.
ಈ ಮಧ್ಯೆಯೇ, ನಟ ಜೂನಿಯರ್ ಎನ್ಟಿಆರ್ ಅವರು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಜಪಾನ್ ಪ್ರವಾಸಕ್ಕೆ ತೆರಳಿದ್ದರು. ಭೂಕಂಪ ಆಗುವ ಸಮಯದಲ್ಲಿಯೂ ಅವರು ಅಲ್ಲಿಯೇ ಇದ್ದರು.
ಭೂಕಂಪದ ಸುದ್ದಿ ಕೇಳುತ್ತಿದ್ದಂತೆಯೇ ಜ್ಯೂನಿಯರ್ ಎನ್ಟಿಆರ್ ಫ್ಯಾನ್ಸ್ ಶಾಕ್ಗೆ ಒಳಗಾಗಿದ್ದರು. ಇದೀಗ ಭಾರತಕ್ಕೆ ಸುರಕ್ಷಿತವಾಗಿ ವಾಪಸಾಗಿರುವ ನಟ, ತಾವು ಸೇಫ್ ಆಗಿ ವಾಪಸಾಗಿರುವುದಾಗಿ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
‘ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ. ಜಪಾನ್ನಲ್ಲಿ ಭೂಕಂಪ ಆಗಿದ್ದು ಶಾಕಿಂಗ್ ಆಗಿದೆ. ನಾನು ಒಂದು ವಾರ ಅಲ್ಲಿಯೇ ಕಳೆದಿದ್ದೇನೆ. ಭೂಕಂಪದಿಂದ ಹಾನಿಗೆ ಒಳಗಾದವರ ಬಗ್ಗೆ ದುಃಖ ಇದೆ. ಅಲ್ಲಿನ ಜನ ಬೇಗ ಚೇತರಿಸಿಕೊಳ್ಳಲಿ. ದೃಢವಾಗಿರಿ ಜಪಾನ್’ ಎಂದು ಅವರು ಹೇಳಿದ್ದಾರೆ.
ನಿನ್ನೆ ಅಂದರೆ ಜನವರಿ 1ರಂದು ಜ್ಯೂನಿಯರ್ ಎನ್ಟಿಆರ್ ಅವರು ತಮ್ಮ ಪತ್ನಿ ಮತ್ತು ಇಬ್ಬರು ಪುತ್ರರೊಂದಿಗೆ ಹೈದರಾಬಾದ್ಗೆ ಆಗಮಿಸಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.