ಹೊಸ ದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು ನಗರದಲ್ಲಿ ಮುಂದಿನ ಜೂನ್ 2ರವರೆಗೆ ನಗರದ ಬಹುತೇಕ ಕಡೆಗಳಲ್ಲಿ ವ್ಯಾಪಕ ಮಳೆ ಬರುವ ನಿರೀಕ್ಷೆ ಇದೆ. ಈ ಅವಧಿಯಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31-33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಕಂಡು ಬರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಉಲ್ಲೇಖಿಸಿದೆ.