ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ವರದಿ, ಮೈಸೂರು:
ಮೈಸೂರಿನ ಹೆಬ್ಬಾಳುನಲ್ಲಿರುವ ಜೆಎಸ್ಎಸ್ ಅರ್ಬನ್ ಹಾತ್ನಲ್ಲಿ ಸತತವಾಗಿ 6 ನೇ ಬಾರಿ ವಿಶೇಷವಾಗಿ ಆಯೋಜಿಸಲಾಗಿರುವ ಗುಜರಾತ್ ಜೆಎಸ್ಎಸ್ ಕ್ರಾಫ್ಟ್ ಉತ್ಸವಕ್ಕೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು.
ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿಗೌತಮ್ ಉತ್ಸವವನ್ನು ಉದ್ಘಾಟಿಸಿದರು. ಗುಜರಾತ್ ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾದ ಇಂಡಿಸ್ಟಿçಯಲ್ ಎಕ್ಸ್ಟೇಕ್ಷನ್ ಕಾಟೇಜ್ ಸಹಯೋಗದೊಂದಿಗೆ ಉತ್ಸವವನ್ನು ನಡೆಸಲಾಗುತ್ತಿದೆ.
ಗುಜರಾತ್ ರಾಜ್ಯದ ವಿವಿಧ ಭಾಗಗಳ ಪ್ರಸಿದ್ಧ ಹಾಗೂ ಕ್ರೀಯಾ ಶೀಲರಾಗಿರುವ ಸುಮಾರು 50 ಕ್ಕೂ ಹೆಚ್ಚು ಕುಶಲಕರ್ಮಿಗಳು ಮೇಳದಲ್ಲಿ ಭಾಗವಹಿಸಿದ್ದಾರೆ.
ಮೇಳದ ವಿಶೇಷ ಎಂದರೆ ತಯಾರಕ ರಿಂದಲೇ ನೇರವಾಗಿ ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಒದಗಿಸುವ ಪ್ರಯತ್ನವನ್ನು ಗುಜರಾತ್ ಸರ್ಕಾರ ಮಾಡುತ್ತಿದೆ.
ಈ ಕಾರಣದಿಂದಾಗಿ ಮೈಸೂರು ಹಾಗೂ ಸುತ್ತಮುತ್ತಲಿನ ಗ್ರಾಹಕರಿಗೆ ಗುಜರಾತ್ ಸಂಸ್ಕೃತಿಯ ಉಡುಗೆ – ತೊಡುಗೆಗಳು ಮತ್ತು ಆಲಂಕಾರಿಕ ವಸ್ತುಗಳು ನೇರವಾಗಿ , ಉತ್ತಮ ಗುಣಮಟ್ಟದಲ್ಲಿ , ಕಡಿಮೆ ಬೆಲೆಗೆ ದೊರೆಯಲಿದೆ . ಶಾಲಾ ಮಕ್ಕಳಿಗೆ , ಮಹಿಳೆಯರಿಗೆ ಮತ್ತು ಕಾರ್ಪೋರೇಟ್ ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಸಕ್ತಿಯುಳ್ಳವರಿಗೆ ಗುಜರಾತಿನ ಪಾರಂಪರಿಕ ಕಲೆಯ ಬಗ್ಗೆ ತರಬೇತಿಯನ್ನು ಗುಜರಾತಿನ ಕುಶಲಕರ್ಮಿಗಳು ಈ ಮೇಳದ ಸಂದರ್ಭದಲ್ಲಿ ನೀಡಲಿದ್ದಾರೆ ,
ಇಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಎಂ.ಶುಕ್ಲ , ಜೆಎಸ್ಎಸ್ ಮಹಾವಿದ್ಯಾಪೀಠದ ಹಣಕಾಸು ವಿಭಾಗದ ನಿರ್ದೆಶಕರಾದ ಎಸ್.ಪುಟ್ಟಸುಬ್ಬಪ್ಪ , ಕೆ.ಆರ್ . ಸಂತಾನ , ಹೆಚ್.ಆರ್ . ಮಹದೇವಸ್ವಾಮಿ , ಮೇಳದ ಸಂಯೋಜಕ ರಾಕೇಶ್ ರೈ, ಎಂ.ಶಿವನoಜಸ್ವಾಮಿ, ಗುಜರಾತ್ ಸರ್ಕಾರದ ಮಾರುಕಟ್ಟೆ ವ್ಯವಸ್ಥಾಪಕ ಡಾ.ಎಸ್.ಡಿ. ಸ್ನೇಹಲ್ ಮಕ್ವಾನಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.