Friday, July 1, 2022

Latest Posts

ಜು. 26ರಿಂದ ಕಾಲೇಜು ಪುನಾರಂಭ: ಪ್ರಥಮ ಕೊರೋನಾ ಡೋಸ್ ಕಡ್ಡಾಯ ಎಂದ ಕುವೆಂಪು ವಿಶ್ವವಿದ್ಯಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ, ಶಿವಮೊಗ್ಗ:

ಕುವೆಂಪು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಪದವಿ, ಮತ್ತು ಬಿ.ಎಡ್ ಆಫ್‌ಲೈನ್ ತರಗತಿಗಳು ಜು. 26ರಿಂದ ಪುನಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಕನಿಷ್ಠ ಪ್ರಥಮ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದು ಹಾಜರಾಗಲು ಸೂಚನೆ ನೀಡಲಾಗಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಕುಲಸಚಿವರು, ವಿವಿ ಧನಸಹಾಯ ಆಯೋಗ (ಯುಜಿಸಿ) ಮತ್ತು ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ವಿವಿ ವ್ಯಾಪ್ತಿಯಲ್ಲಿ ಭೌತಿಕ ತರಗತಿಗಳು ರಂಭವಾಗಲಿವೆ. ವಿದ್ಯಾರ್ಥಿಗಳು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.
ರಾಜ್ಯಸರ್ಕಾರದ ಮಾರ್ಗಸೂಚಿಗಳ ಅನ್ವಯ ತರಗತಿ ಕೊಠಡಿಗಳು, ಹಾಸ್ಟೆಲ್ ಕೊಠಡಿಗಳು, ಪ್ರಗಾಲಯಗಳು, ಕಚೇರಿ ಸೇರಿದಂತೆ ಯ ಕ್ಯಾಂಪಸ್ ಅನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಭೌತಿಕ ಅಂತರ ಕಾಯ್ದುಕೊಳ್ಳುವುದು, ಮತ್ತು ಸಾನಿಟೈಸ್ ಬಳಕೆ ಕಡ್ಡಾಯ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss