ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ರಣತಂತ್ರ ರೂಪಿಸುತ್ತಿದ್ದು, ಬಿಜೆಪಿ ಸರಕಾರ ಇಳಿಸಲು ವಿಪಕ್ಷಗಳು ಒಂದಾಗಿವೆ. ಇದರ ನಡುವೆ ರಾಜ್ಯದಲ್ಲಿ ಮತ್ತೆ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಚರ್ಚೆ ಜೋರಾಗಿಯೇ ಆಗುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಜೊತೆಗೂಡಿ ಅಖಾಡಕ್ಕೆ ಇಳಿಯಲು ಸಿದ್ಧತೆ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರ ನಡುವೆ ದೆಹಲಿಯಲ್ಲಿ ಜು. 18 ರಂದು ಎನ್.ಡಿ.ಎ. ಮೈತ್ರಿಕೂಟದ ಸಭೆ ನಡೆಯಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಲಿದ್ದು, ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ನಂತರ ಎನ್.ಡಿ.ಎ. ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.