ಗ್ಯಾನವಾಪಿ ಮಸೀದಿ ಸಮೀಕ್ಷೆಗೆ ಆದೇಶಿಸಿದ್ದ ಜಡ್ಜ್‌ ಗೆ ಮುಸ್ಲಿಂ ವ್ಯಕ್ತಿಯಿಂದ ಬೆದರಿಕೆ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರಿಗೆ ಬೆದರಿಕೆ ಪತ್ರ ಬಂದಿದೆ.
ಈ ಬೆಳವಣಿಗೆ ನಡೆಯುತ್ತಲೇ ಪೊಲೀಸ್ ಇಲಾಖೆ ಅಲರ್ಟ್‌ ಆಗಿದ್ದು, ನ್ಯಾಯಾಧೀಶರ ಭದ್ರತೆಗೆ ಒಟ್ಟು ಒಂಬತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರಿಗೆ ಕೈ ಬರಹದ ಪತ್ರದ ಮೂಲಕ ಬೆದರಿಕೆ ಹಾಕಲಾಗಿದೆ. ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ), ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಮತ್ತು ವಾರಣಾಸಿ ಪೊಲೀಸ್ ಕಮಿಷನರೇಟ್‌ಗೆ ಈ ಕುರಿತು ಮಾಹಿತಿ ನೀಡಿದ್ದು, ಇಸ್ಲಾಮಿಕ್ ಆಗಾಜ್ ಚಳವಳಿಯ ಪರವಾಗಿ ಕಾಶಿಫ್ ಅಹ್ಮದ್ ಸಿದ್ದಿಕಿ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 26 ರಂದು, ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ದಿವಾಕರ್ ಅವರು ಜ್ಞಾನವಾಪಿ ಸಂಕೀರ್ಣದ ವೀಡಿಯೊಗ್ರಾಫಿ ಸಮೀಕ್ಷೆಗೆ ಆದೇಶಿಸಿದ್ದರು. ಸಮೀಕ್ಷೆಯ ವರದಿಯನ್ನು ಮೇ 19ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ನ್ಯಾಯಾಧೀಶರಿಗೆ ಬರೆದ ಬೆದರಿಕೆ ಪತ್ರದಲ್ಲಿ, “ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಪರಿಶೀಲಿಸುವುದು ಸಾಮಾನ್ಯ ಪ್ರಕ್ರಿಯೆ ಎಂದು ನೀವು ಹೇಳಿಕೆ ನೀಡಿದ್ದೀರಿ, ನೀವು ಮೂರ್ತಿಪೂಜೆ ಮಾಡುವವರು.. ನೀವು ಮಸೀದಿಯನ್ನು ಮಂದಿರವೆಂದು ಘೋಷಿಸುತ್ತೀರಿ.. ಯಾವುದೇ ಮುಸಲ್ಮಾನ ನಿಮ್ಮಿಂದ ನಿರ್ಧಾರವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ‘ಹಿಂದೂ ನ್ಯಾಯಾಧೀಶರಾದ ನೀನು ಕಾಫಿರ್, ಮೂರ್ತಿಪೂಜಕ್’ ಎಂದು ಬರೆದು ವಿಡಿಯೋ ಸಮೀಕ್ಷೆಗೆ ಆದೇಶಿಸಿದ್ದಕ್ಕೆ ಬೆದರಿಕೆ ಒಡ್ಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!