ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ಮಂದಿ ನಕ್ಸಲರಿಗೆ ಜ.30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ ಹೊರಡಿಸಿದೆ.
ನಕ್ಸಲರು ಶರಣಾದ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸೋಕು ಮುನ್ನ ವೈದ್ಯಕೀಯ ಪರೀಕ್ಷೆಗೆ ಅವರನ್ನು ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ ಪೊಲೀಸರು ಇದೀಗ ಕೋರ್ಟ್ ಆರು ಜನ ನಕ್ಸಲರನ್ನು ಜನೆವರಿ 30 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.