ಹೊಸದಿಗಂತ ವರದಿ, ಕಲಬುರಗಿ
ಕೋರ್ಟ್ ನಿಂದ ವಾರೆಂಟ್ ಜಾರಿಯಾದರು ಸಹ ನ್ಯಾಯಾಲಯಕ್ಕೆ ಹಾಜರಾಗದ ಆರೋಪದ ಮೇಲೆ ಜೈ ಭಾರತ್ ಮಾತಾ ಸೇವಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ, ನಿರಗುಡಿ ಹವಾ ಮಲ್ಲಿನಾಥ್ ಮುತ್ಯಾನನ್ನು ಸೋಮವಾರ ಎಂ.ಬಿ ನಗರ ಪೊಲೀಸರು ಬಂಧಿಸಿದ್ದಾರೆ.
2017ರ ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಕಲಬುರಗಿಯ ಎರಡನೇ ಹೆಚ್ಚುವರಿ ನ್ಯಾಯಲಯದಿಂದ ವಾರೆಂಟ್ ಜಾರಿಗೊಳಿಸಿತ್ತು. ನೋಟಿಸ್ ಜಾರಿಯಾದರು ಸಹ ನ್ಯಾಯಲಯಕ್ಕೆ ಹಾಜರಾಗದ ಹವಾ ಮಲ್ಲಿನಾಥ್ ಮುತ್ಯಾರನ್ನು ಸೋಮವಾರ ಕೋರ್ಟ್ ಗೆ ಹಾಜರಾದ ಸಂದರ್ಭದಲ್ಲಿ ಬಂಧಿಸಲಾಗಿದೆ.
2017ರಲ್ಲಿ ಯುವತಿಗೆ ವಂಚನೆ ಮಾಡಿದ ಆರೋಪದಲ್ಲಿ ಪ್ರಕಾಶ್ ಸ್ವಾಮೀಜಿ ಹಾಗೂ ಹವಾ ಮಲ್ಲಿನಾಥ್ ಮುತ್ಯಾರ ಮೇಲೆ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧ ಮಲ್ಲಿನಾಥ್ ಮುತ್ಯಾರಿಗೆ ನ್ಯಾಯಲಯ ನೋಟೀಸ್ ನೀಡಿತು. ಆದರೂ ಮುತ್ಯಾ ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ. ವಾರೆಂಟ್ ಜಾರಿಗೊಂಡ ಹಿನ್ನಲೆ ಸೋಮವಾರ ಕೋರ್ಟ್ ಮುಂದೆ ಹವಾ ಮಲ್ಲಿನಾಥ್ ಮುತ್ಯಾ ಹಾಜರಾಗಿದ್ದರು. ಆಗ ಮಲ್ಲಿನಾಥ್ ಮುತ್ಯಾರನ್ನು ವಶಕ್ಕೆ ಪಡೆದ ನ್ಯಾಯಾಲಯ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.